ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ
ನರಿಕೊಂಬು ಗ್ರಾಮ ಪಂಚಾಯತ್ ಮಿಲನ ೨೦೧೯
ನರಿಕೊಂಬು ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ ಕಾರ್ಯಕ್ರಮ ೨೦೧೯ ಪ್ರಕಾಶ್ ಕಾರಂತರ ಮನೆಯ ವಠಾರದಲ್ಲಿ ನಡೆಯಿತು. ಮಾಜಿ ಸಚಿವರು ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಒಗ್ಗಟ್ಟಿನಿಂದ ನಾವೆಲ್ಲರೂ ದುಡಿಯಬೇಕಾಗಿದೆ ಎಂದು ವಿನಂತಿಸಿದರು. ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ಯುವಕರನ್ನೊಳಗೊಂಡ ತಂಡವನ್ನು ರಚಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ತಾವೆಲ್ಲರೂ ಪಣ ತೊಡಬೇಕಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಸೋಲಿನ ಬಗ್ಗೆ ಪರಮಾವರ್ಶಿಸಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯಾತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ ಎ.ಪಿ.ಎಮ್.ಸಿ ಅಧ್ಯಕ್ಷರಾದ ಪದ್ಮನಾಭ ರೈ ಮುಖಂಡರಾದ ಪ್ರಕಾಶ್ ಕಾರಂತ್, ಪಿ.ಎಸ್.ಅಬ್ದುಲ್ ಹಮೀದ್, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಲ್ಬರ್ಟ್ ಮಿನೇಜಸ್, ಮಾಜಿ ತಾಲೂಕು ಕೆ.ಡಿ.ಪಿ ಸದಸ್ಯರಾದ ಉಮೇಶ್ ಬೋಳಂತೂರು, ಶಂಭೂರು ವಲಯಾಧ್ಯಕ್ಷರಾದ ಉದಯ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಆನಂದ ಸಾಲ್ಯನ್, ಸಂಘಟನಾ ಕಾರ್ಯದರ್ಶಿಯಾದ ಅರುಣ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರು, ಯುವ ಕಾಂಗ್ರೆಸ್‌ನ ಸದಸ್ಯರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ವಲಯ ಕಾಂಗ್ರೆಸ್‌ನ ಪುನರ್ ರಚಿಸಲಾಯಿತು ನೂತನ ವಲಯ ಅಧ್ಯಕ್ಷರಾಗಿ ಮಾಧವ ಕರ್ಬೆಟ್ಟು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮಹಿಳಾ ವಲಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸುಮತಿ, ಉಪಾಧ್ಯಕ್ಷರಾಗಿ ಜುಬೈದಾ ಮತ್ತು ಚಂದ್ರಾವತಿ, ಎಸ್.ಸಿ.ಎಸ್.ಟಿ ಘಟಕದ ಅಧ್ಯಕ್ಷರಾಗಿ ಮೋನಪ್ಪ ನಿನ್ನಿಪಡ್ಪು, ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಪ್ರಶಾಂತ್ ಕರ್ಬೆಟ್ಟು ಮತ್ತು ವಲಯ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ರವೀಂದ್ರ ಸಪಲ್ಯ, ಶೇಖರ್ ಪೂಜಾರಿ, ಕಾರ್ಯದರ್ಶಿಯಾಗಿ ದಿವಾಕರ ಏಲಬೆ, ಕೃಷ್ಣಪ್ಪ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ರಿಯಾಝ್ ನೆಹರುನಗರ ಇವರನ್ನು ನೇಮಕ ಮಾಡಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here