ಬಂಟ್ವಾಳ: ಸಂವಿಧಾನ ವಿರೋಧಿ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ.
ಬಿ.ಮೂಡ ಗ್ರಾಮದ ಗೂಡಿನಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ಈ ದೂರು ನೀಡಿದ್ದು, ಸೆ. 25ರಂದು ಮಂಜುನಾಥ್ ಬಂಟ್ವಾಳ ಎಂಬಾತನು ಮಂಗಳೂರಿನ ಮಾಲ್‌ವೊಂದರಲ್ಲಿ ದೇಶ ವಿರೋಧಿ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದು, ಈತನ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.


ಈ ರೀತಿಯ ದೇಶ ದ್ರೋಹದ ಹೇಳಿಕೆಯಿಂದ ದೇಶದ ಮೂಲ ನಿವಾಸಿಗಳಾದ ಮುಸ್ಲಿಂ ಸಮುದಾಯಕ್ಕೆ ನೋವುಂಟಾಗಿದಲ್ಲದೆ, ಇದರಿಂದ ಮುಸ್ಲಿಮರ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿದಂತಾಗಿದ್ದು, ಇಂತಹ ಹೇಳಿಕೆ ನೀಡಿರುವ ಈತನ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸುವಂತೆ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here