

ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಅಕ್ಟೋಬರ್ 2 ರಂದು ದಾನಿಗಳಿಂದ ಸಮರ್ಪಣೆಯಾಗಲಿರುವ ಬ್ರಹ್ಮ ರಥವನ್ನು ಬಿ.ಸಿ.ರೋಡಿನಲ್ಲಿ ಅಕ್ಟೋಬರ್ 1 ರಂದು ಬೆಳಿಗ್ಗೆ ಗಂಟೆ 10 ಕ್ಕೆ ಬಂಟ್ವಾಳ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ಇದರ ವತಿಯಿಂದ ಸ್ವಾಗತಿಸಿ ಬೀಳ್ಕೊಡಲಾಗುವುದೆಂದು ಗೌರವ ಅಧ್ಯಕ್ಷರಾದ ಬಿ. ರಮಾನಾಥ ರೈ ಹಾಗೂ ಅಧ್ಯಕ್ಷರಾದ ಬಿ. ಪದ್ಮಶೇಖರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರಕ್ಕೆ ಸಮರ್ಪಣೆಯಾಗಲಿರುವ ಬ್ರಹ್ಮರಥವು ಕೋಟೇಶ್ವರದಿಂದ ಹೊರಟು ಅಕ್ಟೋಬರ್ 1 ರಂದು ಬೆಳಿಗ್ಗೆ 8.30ಕ್ಕೆ ಕದ್ರಿಯಿಂದ ಹೊರಡುವ ಬ್ರಹ್ಮರಥವು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಾ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ತಲುಪಲಿದೆ. ಶ್ರೀ ಸುಬ್ರಹ್ಮಣ್ಯ ಕ್ರೇತ್ರದ ಭಕ್ತಾಭಿಮಾನಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಬ್ರಹ್ಮರಥಕ್ಕೆ ಭವ್ಯ ಸ್ವಾಗತ ನೀಡಲಾಗುವುದು. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ವಿನಂತಿಸಿಕೊಳ್ಳುತ್ತೇವೆ.








