ಉಜಿರೆ: ಧರ್ಮಸ್ಥಳದಲ್ಲಿ ಭಾನುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನವೀಕೃತ ಪ್ರವಚನ ಮಂಟಪವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್, ಉಪಸ್ಥಿತರಿದ್ದರು. ಜನಜಾಗೃತಿ ಸಮಾವೇಶ, ಪಾನಮುಕ್ತರ ಅಭಿನಂನಾ ಸಮಾರಂಭ.

ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ. 2ರಂದು ಬುಧವಾರ ಎಸ್.ಡಿ.ಎಂ. ಕಲಾ ಭವನದಲ್ಲಿಜನಜಾಗೃತಿ ಸಮಾವೇಶ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ಪಾಸ್ ತಿಳಿಸಿದ್ದಾರೆ.
ಶಾಸಕ ಹರೀಶ್ ಪೂಂಜ ಸಮಾವೇಶ ಉದ್ಘಾಟಿಸುವರು. ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು.
ಜನಜಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್. ರೈ ಅಧ್ಯಕ್ಷತೆ ವಹಿಸುವರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here