Thursday, October 19, 2023

ಸರಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ: ಸಚಿವ ಸುರೇಶ್ ಕುಮಾರ್

Must read

ವಿಟ್ಲ: ಸರಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ
ನಡೆಸಲಾಗುತ್ತಿದೆ. ೧೪೦ ವರ್ಷಗಳ ಇತಿಹಾಸವಿರುವ ವಿಟ್ಲ ಸರಕಾರಿ ಮಾದರಿ ಶಾಲೆ ಹೆಸರಿಗೆ
ತಕ್ಕಂತೆ ಆಧುನಿಕ ವ್ಯವಸ್ಥೆಯೊಂದಿಗೆ, ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಇಲ್ಲಿಗೆ
ಆಂಗ್ಲ ಮಾಧ್ಯಮದ ೯ ಮತ್ತು ೧೦ನೇ ತರಗತಿಗೆ ಅತೀ ಶೀಘ್ರವಾಗಿ ಮಂಜೂರಾತಿ ನೀಡಲು
ಪ್ರಯತ್ನಿಸುತ್ತೇನೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್
ಕುಮಾರ್ ಹೇಳಿದರು.
ಅವರು ಸೋಮವಾರ ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಕೊಠಡಿ
ಉದ್ಘಾಟಿಸಿ, ಸರಕಾರದ ಉಚಿತ ಸೈಕಲ್‌ಗಳನ್ನು ಹಸ್ತಾಂತರಿಸಿದ ಬಳಿಕ ಸಭೆಯಲ್ಲಿ
ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ವಿಧಾನಪರಿಷತ್
ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭಾಗವಹಿಸಿದ್ದರು.
ಸಭೆಯ ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ವಹಿಸಿದ್ದರು.
ವಿಟ್ಲ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ನಾಯ್ಕ್, ಪಟ್ಟಣ ಪಂಚಾಯಿತಿ ಸ್ಥಾಯಿ
ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್,
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಮೀರ್ ಪಳಿಕೆ ಉಪಸ್ಥಿತರಿದ್ದರು.
ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ ಸ್ವಾಗತಿಸಿ, ಪ್ರಸ್ತಾವಿಸಿದರು. ಮುಖ್ಯ ಶಿಕ್ಷಕಿ
ಪುಷ್ಪಾ ವಂದಿಸಿದರು. ಸಹ ಶಿಕ್ಷಕಿ ರಮಾ ಕಾರ್ಯಕ್ರಮ ನಿರೂಪಿಸಿದರು.

More articles

Latest article