ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರೀ ಮಹಾಬಲ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪೊಳ್ಳಕಜೆ ಗೋವಿಂದ ಭಟ್ ವೈದಿಕತ್ವದಲ್ಲಿ ನವರಾತ್ರಿ ಮಹೋತ್ಸವ ಸೆ.29 ರಿಂದ ಆರಂಭಗೊಂಡಿದ್ದು, ಅ.3 ರಂದು ಮದ್ಯಾಹ್ನ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಮಹಾಬಲ ಸ್ವಾಮೀಜಿ ಆರ್ಶೀವಚನ ನೀಡಲಿದ್ದು, ಉದ್ಯಮಿ ವಸಂತ ಪೈ ಬದಿಯಡ್ಕ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಧಾರ್ಮಿಕ ಮುಂದಾಳು ಡಾ. ಶ್ರೀಧರ ಭಟ್ ಮಾವೆ ಉಪ್ಪಳ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಸುರೇಖಾ ಅಮರನಾಥ ಶೆಟ್ಟಿ, ರಾಮ ಪೂಜಾರಿ ತಾಳಿಪಡ್ಪು, ಹರೀಶ್ ಪೂಜಾರಿ ಮರುವಾಳ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here