ಬಂಟ್ವಾಳ: ಬಂಟ್ವಾಳದ ಎಸ್.ವಿ.ಎಸ್ ಆಂಗ್ಲಮಾಧ್ಯಮ ಶಾಲೆಯ ವಿವಾದವೊಂದಕ್ಕೆ ಸಂಬಂಧಿಸಿ ಸಿದ್ದಕಟ್ಟೆ ನಿವಾಸಿ ಅಶೋಕ್ ಹಲಾಯಿ ಎಂಬಾತ ತಾನು ಸುವರ್ಣ ನ್ಯೂಸ್ ಕ್ಯಾಮರಾ ಮೆನ್ ಎಂದು ಹೇಳಿಕೊಂಡು ಇಂದು ಎಸ್.ವಿ.ಎಸ್ ಶಿಕ್ಷಣ ಸಂಸ್ಥೆಗೆ ಬಂದಿದ್ದಾನೆ. ಬಳಿಕ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಸುದ್ದಿ ಪ್ರಸಾರವಾಗದಂತೆ ಮಾಡಲು ತನಗೆ 50 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದು, ಸಂಸ್ಥೆಯ ಆಡಳಿತ ಮಂಡಳಿಯವರು ಆತನ ಬ್ಲ್ಯಾಕ್ ಮೇಲ್ ಗೆ‌ ಮಣಿದು 50 ಸಾವಿರದ ಚೆಕ್ ನೀಡಿದ್ದಾರೆ. ಆ ಬಳಿಕ ಶಿಕ್ಷಣ ಸಂಸ್ಥೆಯವರು ಸುವರ್ಣ ನ್ಯೂಸ್ ನ ಮಂಗಳೂರು ವರದಿಗಾರರನ್ನ ಸಂಪರ್ಕಿಸಿದಾಗ ಅಶೋಕ್ ಹಲಾಯಿ ಎಂಬಾತ ನಕಲಿ ಪತ್ರಕರ್ತ ಎನ್ನುವುದು ಗೊತ್ತಾಗಿದೆ. ಆ ಬಳಿಕ ಆತನ ಮಾಹಿತಿ ಕಲೆ ಹಾಕಿದಾಗ ಈತ ಯಾವುದೋ ಯೂ ಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅದರ ಹೆಸರಿನ ಜೊತೆ ಸುವರ್ಣ ನ್ಯೂಸ್ ಹೆಸರಲ್ಲೂ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದ ಎನ್ನುವುದು ಗೊತ್ತಾಗಿದೆ. ಹೀಗಾಗಿ ಎಸ್.ವಿ.ಎಸ್ ಆಡಳಿತ ಮಂಡಳಿಯಿಂದ ಆತನ ದೂರವಾಣಿ ಸಂಖ್ಯೆ ಪಡೆದ ಬಳಿಕ ಸುವರ್ಣ ನ್ಯೂಸ್ ನ ಮಂಗಳೂರು ವರದಿಗಾರರು ಆತನಿಗೆ ಕರೆ ಮಾಡಿ ಪೊಲೀಸ್ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆ ಬಳಿಕ ಆತ ಆ 50 ಸಾವಿರದ ಚೆಕ್ ಅನ್ನು ಶಿಕ್ಷಣ ಸಂಸ್ಥೆಗೆ ವಾಪಾಸ್ ಕೊಟ್ಟು ಕ್ಷಮೆ ಕೋರಿ ಪೊಲೀಸ್ ದೂರು ನೀಡದಂತೆ ಅಂಗಲಾಚಿ ಕಾಲ್ಕಿತ್ತಿದ್ದಾನೆ. ಸದ್ಯ ಈತನ ವಿರುದ್ದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here