ತುಮಕೂರು: ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಆಪ್ತಸಹಾಯಕ ರಮೇಶ್ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರು ವಿವಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆಯಷ್ಟೇ ಡಾ.ಜಿ. ಪರಮೇಶ್ವರ್ ಅವರ ಮನೆ ಹಾಗೂ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ರಮೇಶ್ ಅವರನ್ನು ಕೂಡ ಐಟಿ ಅಧಿಕಾರಿಗಳು ತೀವ್ರ ವಿಚಾರಿಸಿದ್ದರು. ರಮೇಶ್ ಮನೆ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇವರು ಹಲವು ವರ್ಷಗಳಿಂದ ಡಾ.ಜಿ.ಪರಮೇಶ್ವರ ಅವರ ಜೊತೆಗಿದ್ದರು. ಆತ್ಮಹತ್ಯೆ ಮೊದಲು ಗೆಳೆಯರಿಗೆ ಪೋನ್ ಮಾಡಿ ರಮೇಶ್ ಆತ್ಮಹತ್ಯೆಯೆ ಬೆದರಿಕೆಯನ್ನು ಹಾಕಿದ್ದರು. ಐಟಿ ಅಧಿಕಾರಿಗಳ ಪ್ರಶ್ನೆಗೆ ನನಗೆ ಉತ್ತರಿಸಲು ಸಾಧ್ಯವಿಲ್ಲ ಎಂದಿದ್ದರು ಎನ್ನಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here