Saturday, October 21, 2023

ಸರಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ

Must read

 

ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮೃತದೇಹದ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪ ಮಿತ್ತಬಾಗಿಲಿನಲ್ಲಿ ನಡೆಯಿತು.

ಅಪರಾಹ್ನ 2.ಗಂಟೆಯ ವೇಳೆಗೆ ಮಂಗಳೂರಿನಿಂದ ಹೊರಟ ಗೋಪಾಲನಾಥ್ ರವರ ಪಾರ್ಥಿವ ಶರೀರ2.50 ರ ವೇಳೆಗೆ ಸಜಿಪಮೂಡ ಗ್ರಾಮಕ್ಕೆ ತಲುಪಿದ್ದು, ಇಲ್ಲಿನ ಮಿತ್ತಕೆರೆಯ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಬಳಿಕ ನಾರಾಯಣ ಪೂಜಾರಿ ಕಮಾಡೆಂಟ್ ಆದ ಪೊಲೀಸ್ ತಂಡ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಪಾರ್ಥಿವ ಶರೀರಕ್ಕೆಗೌರವ ವಂದನೆ ಸಲ್ಲಿಸಿದರು.
ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ್ ರೈ ಮೊದಲಾದರು ಸರಕಾರಿ ಗೌರವ ಸಲ್ಲಿಸಿದರು.


ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಮಮತಾ ಗಟ್ಟಿ, ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಸಂಜೀವ ಪೂಜಾರಿ, ತಹಶೀಲ್ದಾರ್ ರಶ್ಮಿ, ಜಿ.ಪಂ.ಮಾಜಿ ಅಧ್ಯಕ್ಷ ಸದಾನಂದ ಪೂಂಜಾ, ಕೆ.ಪಿ.ಜಗದೀಶ್ ಅಧಿಕಾರಿ, ಶ್ರೀಕಾಂತ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಸೀತಾರಾಮ ಶೆಟ್ಟಿ, ಸಹೋದರ ಚಂದ್ರನಾಥ್, ಗಣೇಶ್ ನಾಥ್, ರಮೇಶ್ ನಾಥ್, ಪುತ್ರ ಮಣಿಕಾಂತ್ ಕದ್ರಿ, ಡಿವೈಎಸ್ಪಿ ದಿನಕರ್ ಶೆಟ್ಟಿ , ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್, ಎಸ್.ಐ. ಚಂದ್ರಶೇಖರ್, ನಾರಾಯಣ ಪೂಜಾರಿ, ರಾಮ ನಾಯ್ಕ್ ಮೊದಲಾದವರು ಪಾಲ್ಗೊಂಡಿದ್ದರು. ಜೋಗಿ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

More articles

Latest article