ಕೇಪು ಕಲ್ಲಂಗಳ ಸರಕಾರಿ ಪ್ರೌಢ ಶಾಲೆಯಲ್ಲಿ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಗಳಲ್ಲೇ ಅತೀ ವಿಶಾಲವಾದ ಸುಸಜ್ಜಿತ ತಾಲೂಕು ಮಟ್ಟದ ಕ್ರೀಡಾಂಗಣವೊಂದು ನಿರ್ಮಾಣಗೊಳ್ಳುತ್ತಿದ್ದು, ತಾಲೂಕು ಮಟ್ಟದ ಕ್ರೀಡೋತ್ಸವದ ಮೂಲಕ ಕ್ರೀಡಾಂಗಣ ಉದ್ಘಾಟನೆಗೊಳ್ಳಲು ಭರದಿಂದ ಸಿದ್ಧಗೊಳ್ಳುತ್ತಿದೆ.
ಕಲ್ಲಂಗಳ ಸರಕಾರಿ ಪ್ರೌಢಶಾಲೆಯ ಸಮೀಪ ಸುಮಾರು ೩ ಎಕರೆ ಸರಕಾರಿ ಜಾಗದಲ್ಲಿ ೧೦ ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹಾಗೂ ಕೇಪು ಕಲ್ಲಂಗಳ ಪ್ರೌಢ ಶಾಲೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಸುವ ಮೂಲಕ ನೂತನ ಅಕ್ಟೋಬರ್ ತಿಂಗಳೊಳಗೆ ಲೋಕಾರ್ಪಣೆಗೊಳ್ಳಲಿದೆ.
ಇಲ್ಲಿ ೨೦೦ಮೀ ಸುತ್ತಳತೆಯ ಟ್ರ್ಯಾಕ್, ಹೈಜಂಪ್, ಲಾಂಗ್ ಜಂಪ್ ಪ್ರತ್ಯೇಕ ಸ್ಥಳ ನಿರ್ಮಿಸಲಾಗುತ್ತಿದೆ. ಯಂತ್ರಗಳ ಮೂಲಕ ಸಮತಟ್ಟು ಮಾಡುವ ಕಾರ್ಯ ಭರದಿಂದ ನಡೆಯುತ್ತಿದೆ. ಮೊದಲಿಗೆ ಇಲಿ ತಾಲೂಕು ಮಟ್ಟದ ಕ್ರೀಡೋತ್ಸವ ಹಾಗೂ ಕ್ರೀಡಾಂಗಣವನ್ನು ರಚಿಸಲು ತೀರ್ಮಾನಿಸಲಾಗಿತ್ತು. ಬಳಿಕ ಒಂದು ಸಮಿತಿ ರಚಿಸಿಕೊಂಡು ಅದರ ಮೂಲಕ ಕಾರ್ಯಚಟುವಟಿಕೆಗಳನ್ನು ನಡೆಸಲಾಗಿದೆ.
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ 3 ಲಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೊಡಂದೂರು 1.50 ಲಕ್ಷ, ತಾಲೂಕು ಪಂಚಾಯಿತಿ ಸದಸ್ಯೆ ಕವಿತಾ ಸುಬ್ಬ ನಾಯ್ಕ್ 1 ಲಕ್ಷ, ತಾಲೂಕು ಪಂಚಾಯಿತಿ ಅಧ್ಯಕ್ಷರ 1 ಲಕ್ಷ ಅನುದಾನ ಸೇರಿದಂತೆ ಊರ ದಾನಿಗಳಿಂದ, ಸಂಘಸಂಸ್ಥೆಗಳಿಂದ ಸಂಗ್ರಹಿಸಲಾಗಿದೆ.
ಈ ಕ್ರೀಡಾಂಗಣವನ್ನು ಜಿಲ್ಲಾ ಕ್ರೀಡಾಂಗಣ ಮಾಡುವಂತೆ ಇನ್ನಷ್ಟು ಅನುದಾನ ಬಿಡಗಡೆಗೊಳಿಸಲು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಇದು ಜಿಲ್ಲಾ ಮಟ್ಟದ ಕ್ರೀಡಾಂಗಣಯಾಗಿ ನಿರ್ಮಾಣವಾದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೂರದ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಬಹುದು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೂತನ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕೀಡಾಕೂಟವನ್ನು ಉದ್ಘಾಟಿಸಲಿದ್ದು, ಶಾಸಕ ಯು.ಟಿ ಖಾದರ್ ಧ್ವಜಾರೋಹಣಗೈಯ್ಯಲಿದ್ದಾರೆ. ನಾನಾ ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ತಾಲೂಕು ಕ್ರೀಡಾಕೂಟದ ಅಧ್ಯಕ್ಷರಾಗಿ ರಾಧಾಕೃಷ್ಣ ಚೆಲ್ಲಡ್ಕ, ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾಗಿ ಬಾಲಚಂದ್ರ ಕಟ್ಟೆ, ಆರ್ಥಿಕ ಸಮಿತಿ ಅಧ್ಯಕ್ಷರಾಗಿ ರಾಜೀವ ಭಂಡಾರಿ, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ, ಶಾಲಾ ಮುಖ್ಯಶಿಕ್ಷಕಿ ಮಾಲತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ದೈಹಿಕ ಶಿಕ್ಷಕಿ ಪುಷ್ಪಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ವಿವಿಧ ಸಮಿತಿ ಪದಾಧಿಕಾರಿಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here