ಬಂಟ್ವಾಳ:  ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್, ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆ ಇದರ ಆಶ್ರಯದಲ್ಲಿ ಕಣಚೂರು ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಪಾಣೆಮಂಗಳೂರಿನ ಆಲಡ್ಕದ ಎಸ್.ಎಸ್. ಅಡಿಟೋರಿಯಂನಲ್ಲಿ ನಡೆಯಿತು.


ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಯುನಿಟ್ ಅಧ್ಯಕ್ಷ ಎನ್.ಬಿ. ಅಬೂಬಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.  ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಅಧ್ಯಕ್ಷ ಅಬೂ ಸ್ವಾಲಿಹ್ ಫೈಝಿ ಉದ್ಘಾಟಿಸಿ ಶುಭ ಹಾರೈಸಿದರು.
ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ಅಧ್ಯಕ್ಷ ಇರ್ಷಾದ್ ದಾರಿಮಿ ದುಆಃ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಅಬ್ದುಲ್ ದಾರಿಮಿ ಕುಕ್ಕಿಲ, ಅಬ್ದುಲ್ ಖಾದರ್ ಮದನಿ, ಖಲೀಲ್ ದಾರಿಮಿ,ಫೈರೋಝ್ ವಲಚ್ಚಿಲ್, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು ೩೧೫ ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು. 75 ಮಂದಿಗೆ ಕಣಚೂರು ಆಸ್ಪತ್ರೆಯಲ್ಲಿ ಉಚಿತವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿಫಾರಸು ಮಾಡಲಾಯಿತು. 18 ಮಂದಿ ರಕ್ತ ನೀಡಿ ಜೀವದಾನಿಗಳಾದರು. ದಾನಿಗಳಿಂದ ರಕ್ತ ಸಂಗ್ರಹ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಣಚೂರು ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here