

ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೂರು-ಕಾಂಞಗಾಡ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶ್ರೀ ಕೋಡಂದೂರು, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಾರಾನಾಥ ಆಳ್ವ, ಪಕ್ಷದ ಪ್ರಮುಖರಾದ ರಾಜೀವ್ ಭಂಡಾರಿ, ಮನೋಹರ್ ಪೆರುವಾಯಿ, ಬಾಲಚಂದ್ರ ಕಟ್ಟೆ, ಈಶ್ವರ ಭಟ್ ಕಾನ, ಲೋಕೋಪಯೋಗಿ ಇಲಾಖೆಯ ಸಹಾಯಕ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಷಣ್ಮುಗಂ, ಸಹಾಯಕ ಇಂಜಿನಿಯರ್ ಪ್ರೀತಂ, ಕೇಪು ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಸದಸ್ಯರು, ಊರ ನಾಗರಿಕರು ಉಪಸ್ಥಿತರಿದ್ದರು.








