


ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲ್ಲೂಕು ಪಂಚಾಯಿತಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹಾಗೂ ಕೇಪು ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯ ವತಿಯಿಂದ ಬಂಟ್ವಾಳ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಹಾಗೂ ನೂತನವಾಗಿ ನಿರ್ಮಾಣಗೊಂಡ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಇದೇ 23 ಮತ್ತು 24ರಂದು ನಡೆಯಲಿದೆ ಎಂದು ತಾಲ್ಲೂಕು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ ತಿಳಿಸಿದರು.
ಅವರು ಸೋಮವಾರ ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೂತನ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕ್ರೀಡಾಜ್ಯೋತಿ ಸ್ವೀಕಾರ ಮಾಡಲಿದ್ದಾರೆ. ಮಂಗಳೂರು ಶಾಸಕ ಯು.ಟಿ ಖಾದರ್ ಧ್ವಜಾರೋಹಣಗೈಯ್ಯಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ ಪಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್ಎಲ್ ಭೋಜೇ ಗೌಡ, ದಕ್ಷಿಣ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕಸ್ತೂರಿ ಪಂಜ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೆರ, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೊಡಂದೂರು ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಉದಯಕುಮಾರ್ ಚೌಟ ಮಾಣಿ ಬಹುಮಾನ ವಿತರಿಸಲಿದ್ದಾರೆ. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಕ್ಯಾಂಪ್ಕೋ ಅಧ್ಯಕ್ಷ ಎಸ್ಆರ್ ಸತೀಶ್ಚಂದ್ರ, ಉದ್ಯಮಿ ಸುಬ್ರಾಯ ಪೈ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಎಸ್ಡಿಎಂಸಿ ಕಾಯಾಧ್ಯಕ್ಷ ಬಾಲಚಂದ್ರ ಕಟ್ಟೆ, ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಬಾಲಕೃಷ್ಣ ಕಾರಂತ ಎರುಂಬು ಪುಸ್ಪಾಕರ ರೈ, ಜಿನಚಂದ್ರ ಉಪಸ್ಥಿತರಿದ್ದರು.







