ಬಂಟ್ವಾಳ, ಅ.3: ಅರಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,
ರಾತ್ರಿಯಿಡಿ ಮಳೆಯಾಗುವ ಸಾಧ್ಯತೆಗಳಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆ ಗಳಿಗೆ ಪದವಿಪೂರ್ವ ತರಗತಿಗಳ ವರೆಗೆ ನಾಳೆ 25 ರಂದು ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಈ ಅದೇಶ ಹೊರಡಿಸಿ ದ್ದಾರೆ.

ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ. ಬೆಳಗ್ಗೆಯಿಂದಲೇ ದ.ಕ., ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.
ತಗ್ಗು ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಎಚ್ಚರವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ, ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here