ಬಂಟ್ವಾಳ: ಅಕ್ರಮ ಜೂಜಾಟ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳ ಸಹಿತ ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮಠ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿಗಳಾದ ಸಂದೇಶ, ಪ್ರಶಾಂತ, ಪ್ರಶಾಂತ., ಸುರೇಂದ್ರ, ಯೋಗೀಶ, ಪ್ರದೀಪ್ ಬಂಧಿತರಾಗಿದ್ದು, ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ 1,130 ರೂ., ಆಟೋ ರಿಕ್ಷಾ, ಮೋಟಾರು ಸೈಕಲ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು ಇವುಗಳ ಮೌಲ್ಯ 71,180 ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅ. 30ರಂದು ಬಂಟ್ವಾಳ ತಾಲೂಕು ಇರ್ವತ್ತೂರು ಗ್ರಾಮದ ಮಠ ಎಂಬಲ್ಲಿನ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ 10ಮಂದಿಯ ತಂಡವೊಂದು ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಆರೋಪಿಗಳಾದ ಪ್ರಶಾಂತ, ಸಂದೀಪ್, ಹರೀಶ್, ಗುರುಪ್ರಸಾದ್ ಪರಾರಿಯಾಗಿದ್ದು, ಉಳಿದ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here