

ಉಜಿರೆ: ಮಂಗಳೂರಿನ ತುಳುಕೂಟದ ಆಶ್ರಯದಲ್ಲಿ ತುಳು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭವು ಶನಿವಾರ ಗುರುವಾಯನಕೆರೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ ಮತ್ತು ತುಳುಕೂಟದ ಕಾರ್ಯದರ್ಶಿ ರತ್ನಕುಮಾರ್ ಎಂ. ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿಗರಿಷ್ಠ ಅಂಕ ಪಡೆದ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಕುಮಾರಿ ತೇಜಸ್ವಿನಿ ಕೆ.ಮತ್ತು ಪಿ.ಯು.ಸಿ.ಯಲ್ಲಿ ಗರಿಷ್ಠ ಅಂಕ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಮನೀಶ್ ಶ್ರೀರಾಮ್ ಅವರಿಗೆ ತುಳು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷಆರ್.ಯನ್. ಪೂವಣಿ ಕಾರ್ಯಕ್ರಮ ಉದ್ಘಾಟಿಸುವರು.
ಮಂಗಳೂರು ತುಳುಕೂಟದ ಅಧ್ಯಕ್ಷ ಬಿ.ದಾಮೋದರ ನಿಸರ್ಗ ಅಧ್ಯಕ್ಷತೆ ವಹಿಸುವರು.
ಉಜಿರೆಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ಡಾ.ದಿವಾ ಕೊಕ್ಕಡ ಮತ್ತು ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ ಶುಭಾಶಂಸನೆ ಮಾಡುವರು.








