ಪುಂಜಾಲಕಟ್ಟೆ: ಸರಪಾಡಿ ಯುವಕ ಮಂಡಲದ ವತಿಯಿಂದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ನ. 2ರಂದು ಯುವಕ ಮಂಡಲದ ವಠಾರದಲ್ಲಿ ನಡೆಯಲಿದೆ. ಪಂದ್ಯಾಟವನ್ನು ರಾತ್ರಿ 8ಕ್ಕೆ ಜಿ.ಪಂ.ಸದಸ್ಯ ಬಿ.ಪದ್ಮಶೇಖರ್ ಜೈನ್ ಅವರು ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾ ವಾಲಿಬಾಲ್ ಅಸೊಸಿಯೇಶನ್ ಕೋಶಾಧಿಕಾರಿ ಅಹಮ್ಮದ್ ಮುಸ್ತಾಫಾ, ಉದ್ಯಮಿ ಮ್ಯಾಥ್ಯು ಅಟಪಟ್ಟು, ಜಯಪ್ರಕಾಶ್ ಶೆಟ್ಟಿ ಉಪ್ಪಿನಂಗಡಿ, ದಂತ ವೈದ್ಯ ಡಾ| ಬಾಲಚಂದ್ರ ಶೆಟ್ಟಿ ಸರಪಾಡಿ, ನ್ಯಾಯವಾದಿ ಸುಂದರ್ ಬಾಚಕೆರೆ, ಕುಸುಮಾಕರ ಶೆಟ್ಟಿ ಕುರ್ಯಾಳ, ಶಶಿಕಾಂತ ಶೆಟ್ಟಿ ಆರುಮುಡಿ, ಲಿಯೋ ಫೆರ್ನಾಂಡೀಸ್ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಶಂಕರನಾರಾಯಣ ಹೊಳ್ಳ, ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಚೇತನ್ ಕುಂದರ್, ಖಾದರ್ ಇಕ್ರಾ ಭಾಗವಹಿಸಲಿದ್ದಾರೆ. ಪಂದ್ಯಾಟದ ವಿಜೇತರಿಗೆ ನಗದು ಹಾಗೂ ಟ್ರೋಫಿ ಬಹುಮಾನ ವಿರುತ್ತದೆ ಎಂದು ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here