ಬಂಟ್ವಾಳ: ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿ ರದ್ದತಿಗೆ ದಂಡ ವಸೂಲಿ ಮಾಡುತ್ತಿರುವ ಕ್ರಮದ ಬಗ್ಗೆ ಬಂಟ್ವಾಳ ಶಾಸಕರ ಕಚೇರಿಗೆ ಈ ದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿದ ಸಂಧರ್ಭದಲ್ಲಿ ಶಾಸಕರು ಸಚಿವರ ಗಮನ ಸೆಳೆದು ಇಲಾಖೆಯ ಈ ಕ್ರಮದಿಂದ ಬಡವರ್ಗದ ಜನರಿಗೆ ಆಗುತ್ತಿರುವ ತೊಂದರೆ ಬಗ್ಗೆ ವಿವರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಯವರಲ್ಲಿ ಮಾತುಕತೆ ನಡೆಸಿ ದಂಡ ವಸೂಲಾತಿಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿ ಈ ಬಗ್ಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರೊಂದಿಗೆ ವಿಷಯದ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು.
ದಂಡ ವಸೂಲಾತಿಯ ಬಗ್ಗೆ ಸರಕಾರದಿಂದ ನೀಡಲಾದ ಆದೇಶ-ಸುತ್ತೋಲೆ ತಕ್ಷಣ ತನಗೆ ಕಳುಹಿಸಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here