ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ವೃತ್ತಿ ಶಿಕ್ಷಕರ ಸಂಘ, ಮಂಗಳೂರು, ದ.ಕ ಇವರ ಸಹಯೋಗದೊಂದಿಗೆ ವೃತ್ತಿ ಶಿಕ್ಷಣ ವಸ್ತು ಪ್ರದರ್ಶನ ಮತ್ತು ಮಕ್ಕಳ ಕಲಿಕೋತ್ಸವ ಕಾರ್‍ಯಕ್ರಮ  ನ. 7 ಮತ್ತು ನ. 8 ರಂದು ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆಯಲಿರುವುದು. ವಿವೇಕಾನದಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್‌ ಕಾರ್‍ಯಕ್ರಮವನ್ನು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿರುವರು. ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಣಾಧಿಕಾರಿಗಳು, ವಿದ್ಯಾಕೇಂದ್ರದ ಹಿರಿಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿರುವರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ವೀಕ್ಷಣೆಗೆ ಮುಕ್ತ ಅವಕಾಶವಿದೆ. ಸಂಪರ್ಕಕ್ಕಾಗಿ 9449773120.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here