

ಬಂಟ್ವಾಳ: ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿಯ ಮುಂದಿನ 20 ತಿಂಗಳ ಅವಧಿಗೆ ಅಧ್ಯಕ್ಷರಾಗಿ ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಕಳೆದ 20 ತಿಂಗಳ ಅವಧಿಯಲ್ಲಿ ಧನಲಕ್ಮೀ ಸಿ.ಬಂಗೇರ ಅವರು ಆಧ್ಯಕ್ಷರಾಗಿದ್ದರು, ಅವರ ಅಧ್ಯಕ್ಷ ಅವಧಿ ಮುಗಿದ ಹಿನ್ನೆಲೆಯಲ್ಲಿ ಮಲ್ಲಿಕಾ ವಿ.ಶೆಟ್ಟಿ ಯವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಸಚಿವ ಬಿ.ರಮಾನಾಥ ರೈ,ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಾಧ್ಯಕ್ಷ ಅಬ್ಬಾಸ್ ಆಲಿ ಸಹಿತ ತಾ.ಪಂ.ನ ಎಲ್ಲಾ ಸದಸ್ಯರು ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.







