ವಿಟ್ಲ: ಇಡ್ಕಿದು ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ರಾಜೇಶ್ ಬೊಳ್ಳರಮಜಲು ಮಿತ್ತೂರು ಇವರ ಕುಟುಂಬಕ್ಕೆ ಊರಿನ ಪರ ಊರಿನ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ ರೂ. 60600 ನ್ನು ಅವರ ಹೆಂಡತಿ ಮಕ್ಕಳು ಮತ್ತು ತಾಯಿಯವರ ಸಮ್ಮುಖದಲ್ಲಿ ಫ್ರೆಂಡ್ಸ್ ಕ್ಲಬ್ ಮಿತ್ತೂರು ಕಚೇರಿಯಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಕೆ.ಯಸ್.ಸುರೇಶ್, ತಾಲೂಕು ಪಂಚಾಯಿತಿ ಸದಸ್ಯರಾದ ವನಜಾಕ್ಷಿ. ಎಸ್ ಭಟ್, ಇಡ್ಕಿದು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಮೇಶ್ ಭಟ್ ಎಂ.ಎಚ್.ಉಪಸ್ಥಿತರಿದ್ದರು.
ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಎಂ.ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಆನಂದ ನಾಯ್ಕ ವಂದಿಸಿದರು. ಕ್ರೀಡಾ ಕಾರ್ಯದರ್ಶಿ ಈಶ್ವರ ಗೌಡ ಕಾರ್ಯಕ್ರಮ ನಿರೂಪಿಸಿದರು. ಫ್ರೆಂಡ್ಸ್ ಕ್ಲಬ್ಬಿನ ಸದಸ್ಯರು ಸಹಕರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here