

ಬಂಟ್ವಾಳ, : ನವೆಂಬರ್ ೩೦ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ವಿವೇಕಾನಂದ ವಿದ್ಯಾಕೇಂದ್ರದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದ್ದಾರೆ.
ಅವರು ಗುರುವಾರ ಬಂಟ್ವಾಳ ಪ್ರೆಸ್ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮ ಪದವಿ ಕಾಲೇಜು, ಲಯನ್ಸ್ ಕ್ಲಬ್ ಬಂಟ್ವಾಳ, ಎಂಆರ್ಪಿಎಲ್ ಮಂಗಳೂರು, ಮಹಿಮಾ ಫೌಂಡೇಶನ್ ಬಂಟ್ವಾಳ ಆಶ್ರಯದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ ಸಹಯೋಗದೊಂದಿಗೆ ನಡೆಯಲಿದೆ ಎಂದು ತಿಳಿಸಿದರು.
ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ಬಯೋಡಾಟಾ, ಆಧಾರ್ ಕಾರ್ಡ್ ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಸುಮಾರು ೩೦ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, ೧೫೦೦ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಎಸೆಸೆಲ್ಸಿ, ಐಟಿಐ, ಪದವಿ ಪಡೆದ ವಿದ್ಯಾರ್ಥಿಗಳು ಸದುಪಯೋಗ ಪಡೆಯಬಹುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದಯಾನಂದ, ಕೃಷ್ಣಪ್ರಸಾದ್, ಲಕ್ಷ್ಮಣ್ ಕುಲಾಲ್, ವಸಂತಕುಮಾರ್ ಶೆಟ್ಟಿ, ಜಗದೀಶ್.ಬಿ., ಶ್ರೀನಿವಾಸ ಪೂಜಾರಿ, ದಾಮೋದರ, ಉಮೇಶ್ ಆಚಾರ್ಯ ಹಾಜರಿದ್ದರು.







