Thursday, April 11, 2024

ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರ, ದುರ್ಗಾನಗರ , ಕುರಿಯಾಳ ಇದರ ನೂತನ ಭಜನಾ ಮಂದಿರದ ನಿಧಿ ಕುಂಭ , ಶಿಲಾನ್ಯಾಸ ಸಮಾರಂಭ

ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರ, ದುರ್ಗಾನಗರ , ಕುರಿಯಾಳ ಇದರ ನೂತನ ಭಜನಾ ಮಂದಿರದ ನಿಧಿ ಕುಂಭ ಸಹಿತ ಶಿಲಾನ್ಯಾಸ ಸಮಾರಂಭ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮನ.14 ರಂದು ಗುರುವಾರ ಬೆಳಿಗ್ಗೆ 9.10 ರ ಸುಮೂರ್ತದಲ್ಲಿ ನಡೆಯಿತು.

ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿದರು.
ಮೋನಪ್ಪ ಆಚಾರ್ಯ ರಾಯಿ ಹಾಗೂ ವೇ. ಮೂ. ಶ್ರೀ ಸುದರ್ಶನ್ ಬಳ್ಲಾಲ್ ಇವರು ವೈದಿಕ ಕ್ರಿಯೆ ನೆರವೇರಿಸಿದರು.

ಸಮಾರೋಪ ಸಮಾರಂಭದಲ್ಲಿ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷ ಕೆ ಸೇಸಪ್ಪ ಕೋಟ್ಯಾನ್, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ಅಮ್ಟಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ ಮತ್ತು ಹಲವು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು .
ಜಗದೀಶ್ ಬಂಗೇರ ಹೊಸಮಣ್ಣು ಸ್ವಾಗತಿಸಿ
ಹರೀಶ್ ಶೆಟ್ಟಿ ಪಡು ಪ್ರಸ್ತಾಪಿಸಿ, ದಿನೇಶ್ ಸುವರ್ಣ ರಾಯಿ ನಿರೂಪಿಸಿ ವಂದಿಸಿದರು

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...