


ವಿಟ್ಲ: ಬಂಟ್ವಾಳ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್, ಅವರ ಜ್ಞಾನ ಮಂಜೂಷಾ, ಜ್ಞಾನ ಪೀಯೂಷ ನೈತಿಕ ಮೌಲ್ಯಾಧಾರಿತ ಪುಸ್ತಕದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಒಕ್ಕೆತ್ತೂರು ಸರಕಾರಿ ಹಿ.ಪ್ರಾ.ಶಾಲೆಯ 6ನೇ ತರಗತಿಯ ವಿದ್ಯಾಶ್ರೀ ದ್ವಿತೀಯ ಸ್ಥಾನ, 7ನೇ ತರಗತಿಯ ಮಹಮ್ಮದ್ ರಿಹಾನ್ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಹಾಗೂ ೮ನೇ ತರಗತಿಯ ಯಶ್ವಿನಿ 8ನೇ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಾದ ವಿದ್ಯಾಶ್ರೀ ಮತ್ತು ಮಹಮ್ಮದ್ ರಿಹಾನ್ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಇವರಿಗೆ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರ ಸಹಕಾರದೊಂದಿಗೆ ಶಿಕ್ಷಕಿಯಾದ ಭಾರತಿ ಸಿ. ಮಾರ್ಗದರ್ಶನ ನೀಡಿದ್ದರು.







