


ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ, ತಾಲೂಕು ಬಾಲಭವನ ಸಮಿತಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವರ ವತಿಯಿಂದ ತಾಲೂಕು ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಪ್ರತಿಭೆ ಗಳನ್ನು ಅನಾವರಣ ಮಾಡಲು ಸೂಕ್ತ ವೇದಿಕೆ ನಿರ್ಮಿಸಿ ಕೊಡುವುದು ಅಗತ್ಯ ಎಂದರು.
ಪ್ರತಿಭೆಗಳಿಗೆ ಅವಕಾಶ ಸಿಕ್ಕಿದರೆ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಹಾಸ ಕರ್ಕೇರ ವಹಸಿದ್ದರು.ಮುಖ್ಯ ಅತಿಥಿ ಅಬ್ಬಾಸ್ ಅಲಿ,ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆಪ್ರತಿಭಾ ರೈ , ಹಿರಿಯ ಮೇಲ್ವಿಚಾರಕಿ ಗಾಯತ್ರಿ ಬಾಯಿ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. , ಬಿ. ಭಾರತಿ ಹಿರಿಯ ಮೇಲ್ವಿಚಾರಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೇಲ್ವಿಚಾರಕಿಯರಾದ ಸರೋಜ ಭಟ್, ಸುಜಾತಾ, ಶಾಲಿನಿ, ನೀತಾ ಹಾಜರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಧನ್ಯವಾದ ನೀಡಿದರು.
ಮೇಲ್ವಿಚಾರಕಿ ಸಿಂಧು ನಿರೂಪಿಸಿದರು.
ಮಕ್ಕಳಿಗೆ ಅಭಿನಯ ಗೀತೆ, ಚಿತ್ರ ಬಿಡಿಸುವ, ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.





