ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.)ಬಂಟ್ವಾಳ ತಾಲೂಕು ಶಾಖೆ ಇದರ ವತಿಯಿಂದ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಸರಕಾರಿ ನೌಕರರಿಗೆ ಕಾನೂನು ಮಾಹಿತಿ ಕಾರ್ಯಾಗಾರ ಹಾಗೂ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ನ.23ರಂದು( ನಾಳೆ). ಶನಿವಾರ ಬೆಳಿಗ್ಗೆ ಬಿಸಿರೋಡಿನ ಸರಕಾರಿ ನೌಕರರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಪ್ರಕಟನೆಯ ಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಮಾರಂಭ ವನ್ನು ಉದ್ಘಾಟಿಸಲಿದ್ದು, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಶುಭಾಶಂಸನೆ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ನೌಕಕರ ಸಂಘದ ತಾಲೂಕು ಅಧ್ಯಕ್ಷ ಉಮನಾಥ ರೈಮೇರಾವು ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ್ ಎಸ್.ಆರ್.ರಶ್ಮಿ , ಇ.ಒ.ರಾಜಣ್ಣ, ಬಿ.ಒ.ಜ್ಞಾನೇಶ್, ಆರೋಗ್ಯಾಧಿಕಾರಿ ದೀಪ ಪ್ರಭು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅತಿಥಿಗಳಾಗಿ ಅಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here