


ಬಂಟ್ವಾಳ: ಅಟೋ ರಿಕ್ಷಾ ಚಾಲಕ ಮಾಲಕರ ಸಂಘ ಬಿಸಿರೋಡು ಶಾಖೆ, ಇದರ 31 ನೇ ವಾರ್ಷಿಕ ಮಹಾಸಭೆ ನ.26 ರಂದು ಬೆಳಿಗ್ಗೆ 10 ಗಂಟೆಗೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಬಂಟ್ವಾಳ ರಿಕ್ಷಾ ಚಾಲಕ ಮಾಲಕರ ಸಂಘಧ ಆಧ್ಯಕ್ಷ ವಸಂತ ಕುಮಾರ್ ವಿ.ಮಣಿಹಳ್ಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮುಖ್ಯ ಅತಿಥಿಯಾಗಿ ಅಗಮಿಸಲಿದ್ದು, ಬಿ.ಎಂ.ಎಸ್.ನ ರಾಜ್ಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಮಹಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.






