ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ಸಂಸ್ಥೆಯ ಹಿರಿಯ ವಿದ್ಯಾರ್ಥಿ ವಿಟ್ಲ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಭಾಸ್ಕರ ಶೆಟ್ಟಿ ಉದ್ಘಾಟಿಸಿದರು.
ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸ್ ಅಧ್ಯಕ್ಷ ಉಮ್ಮರ್ ಫಾರೂಕ್ ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ಆಡಳಿತ ಮಂಡಳಿ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್ ಮತ್ತು ಪದ್ಮಯ್ಯ ಗೌಡ ಉಪಸ್ಥಿತರಿದ್ದರು.
ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಶಂಕರನಾರಾಯಣ ಪ್ರಸಾದ ನಿರೂಪಿಸಿದರು.

 

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here