ಸಿದ್ಧಕಟ್ಟೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ. ಸತ್ಯನಾರಾಯಣ
ಭಟ್ ರವರಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ ಹಳೆ ವಿದ್ಯಾರ್ಥಿ ಸಂಘ, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸಂದೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಂಗಪ್ಪ ಬಂಗೇರ, ಸಂಗಬೆಟ್ಟು ಕ್ಷೇತ್ರದ ತಾ.ಪಂ. ಸದಸ್ಯರಾದ ಪ್ರಭಾಕರ ಪ್ರಭು, ಸಂಗಬೆಟ್ಟು ಕ್ಷೇತ್ರ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರತ್ನಕುಮಾರ್ ಚೌಟ,ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರಿಮತಿ ಗುಲಾಬಿ ಶೆಟ್ಟಿ, ಉಪಾಧ್ಯಕ್ಷರಾದ ಸತೀಶ್ ಪೂಜಾರಿ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸೇಸಪ್ಪ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತೀಕ್ ಅಮೀನ್, ನಾರಾಯಣ್ ನಾಯಕ್,ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ತುಂಗಪ್ಪ ಬಂಗೇರ ಕಾಲೇಜಿನ ಶ್ರೇಯಾಭಿವೃದ್ಧಿಗೆ ಶ್ರಮಿಸಿದ ಪ್ರೊ. ಸತ್ಯನಾರಾಯಣ ಭಟ್  ಅವರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರೊಫೆಸರ್ ಗಣಪತಿ ಭಟ್ ಕುಳಮರ್ವ ಅಭಿನಂದನಾ ಭಾಷಣ ಮಾಡಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ
ಮುಖ್ಯಸ್ಥರಾದ ಸೌಮ್ಯ ಎಚ್. ಕೆ. ಪ್ರಸ್ತಾವನೆ ಮಂಡಿಸಿದರು. ವಿದ್ಯಾರ್ಥಿ ಪ್ರಜ್ವಲ್ ನಿರೂಪಿಸಿ, ರಾಜ್ಯಶಾಸ್ತ್ರ
ವಿಭಾಗದ ಮುಖ್ಯ ಶಿಕ್ಷಕಿ ನಸೀಮಾ ಬೇಗಂ ವಂದಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳು ಬೋಧಕ ಬೋಧಕೇತರ
ವರ್ಗ, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here