ವಿಟ್ಲ: ವಿಟ್ಲ ಶ್ರೀ ಸಿದ್ಧಿಗಣಪತಿ ಸಹಿತ ವಿದ್ಯಾ ಸರಸ್ವತಿ ಮಹಾಯಾಗ ಸಮಿತಿ ಮತ್ತು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಇದರ ಸಹಯೋಗದೊಂದಿಗೆ ಶ್ರೀ ಸಿದ್ಧಿಗಣಪತಿ ಸಹಿತ ವಿದ್ಯಾ ಸರಸ್ವತಿ ಮಹಾಯಾಗವು ಡಿ.29 ರಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವ ಸಮಿತಿ ಅಧ್ಯಕ್ಷ ಭವಾನಿಶಂಕರ ಕಂಡ್ಲೂರು ಬಿಡುಗಡೆ ಮಾಡಿದರು.
ಯಾಗ ಸಮಿತಿ ಗೌರವಾಧ್ಯಕ್ಷ ಸದಾಶಿವ ಆಚಾರ್ಯ, ಬಾಲಗೋಕುಲ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ ಕೆ. ವಿಟ್ಲ ಅರಮನೆ ವೇದಿಕೆಯಲ್ಲಿದ್ದರು.
ಮಂಜುನಾಥ ಪೈ ಪ್ರಾರ್ಥಿಸಿದರು. ಯಾಗ ಸಮಿತಿ ಅಧ್ಯಕ್ಷ ರಾಘವೇಂದ್ರ ಪೈ ಸ್ವಾಗತಿಸಿ, ಪ್ರಸ್ತಾವಿಸಿದರು. ವಿನಯ ಆಲಂಗಾರು ವಂದಿಸಿದರು. ಪರಮೇಶ್ವರ ಆಚಾರ್ಯ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here