

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ೧೦ ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಸಣ್ಣಕುಕ್ಕು-ಕರ್ಪೆ ಗುದ್ದಲಿ ಪೂಜೆಯನ್ನು ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ವಿಠಲ್ ನೆರೆವೇರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ.ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ, ಗ್ರಾ.ಪಂ.ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರಾದ ಶಿವರಾಜ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯ, ಮಾಜಿ ಜಿ.ಪಂ.ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ಸುರೇಶ್ ಶೆಟ್ಟಿ ಕಾಂದಿಲ, ಅರುಣ್ ಪೂಜಾರಿ, ಜಿ.ಕೆ.ಸಾಲ್ಯಾನ್, ಇಂಜಿನಿಯರ್, ಗುತ್ತಿಗೆದಾರರು ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.








