

ಬೆಳ್ತಂಗಡಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಿ.8ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ. ಡಿ.8ರಂದು ಮಧ್ಯಾಹ್ನ 1:45ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 2:25ಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ 347 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭವನ್ನು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನೇರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಸ್ಪಿ ಲಕ್ಷ್ಮೀಪ್ರಸಾದ್ ಸಭಾಂಗಣ ಮತ್ತು ಧರ್ಮಸ್ಥಳದ ಹೆಲಿಪ್ಯಾಡ್ ಪರಿಶೀಲನೆ ನಡೆಸಿದರು.








