ಮಂಗಳೂರು: ಕಜಕಿಸ್ತಾನದ ಆಲ್ಮಾಟಿಯಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ ನಾಲ್ಕು ಬೆಳ್ಳಿ ಪದಕ‌ ಪಡೆದಿದ್ದಾರೆ. ಬೆಂಚ್ ಪ್ರೆಸ್, ಸ್ಕಾಟ್, ಡೆಡ್ ಲಿಪ್ಟ್ ಮತ್ತು ಓವರ್ ಆಲ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ದೀಪಾ ಬೆಳ್ಳಿ ಪದಕ ಗೆದ್ದುಕೊಂಡರು.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಬಲಿಷ್ಟ ಮಹಿಳೆ ಪ್ರಶಸ್ತಿ ಗೆ ಪಾತ್ರರಾಗಿದ್ದರು. ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್  ಜೂನಿಯರ್ ವಿಭಾಗದಲ್ಲಿ ಎರಡು ಚಿನ್ನದ ಪದಕ ಪಡೆದ ಋತ್ವಿಕ್ ಅಲೆವೂರಾಯ ಅವರ ತಾಯಿಯಾಗಿರುವ ದೀಪಾ ಕೆ.ಎಸ್., ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ಅವರ ಪತ್ನಿ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here