ಕಲ್ಲಡ್ಕ: ಶಿಕ್ಷಣವೆಂಬುದು ಅವರ ಗುರಿಯನ್ನು ತಲುಪಿಸುವ ದಾರಿಯನ್ನು ತೋರಿಸುತ್ತದೆ. ಸಾಧನೆ ಎಂಬುದು ಸಾಧಕರ ಸೊತ್ತು. ಅದಕ್ಕೆ ಅನೇಕ ಶ್ರಮ, ಪ್ರಯತ್ನ, ಅನೇಕ ರೀತಿಯ ಶಿಸ್ತು-ಸಂಸ್ಕಾರ ಬೇಕಾಗುತ್ತದೆ. ಅದೆಲ್ಲವೂ ಈ ಶಿಕ್ಷಣ ಸಂಸ್ಥೆಯಲ್ಲಿ ಸುಲಭವಾಗಿ ದೊರೆಯುತ್ತದೆ. ಇಂತಹ ಮೌಲ್ಯಯುತವಾದ, ಸಂಸ್ಕಾರಯುತವಾದ ಶಿಕ್ಷಣವನ್ನು ಪಡೆಯುತ್ತಿರುವ ನೀವು ಪುಣ್ಯವಂತರು ಎಂದು ಕರ್ನಾಟಕ ಸರಕಾರದ ಕಾನೂನು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ ಸಿ ಮಾಧುಸ್ವಾಮಿ ವಿದ್ಯಾರ್ಥಿಗಳ ಚಟುವಟಿಕೆಯನ್ನು ವೀಕ್ಷಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಿಪಟೂರು ಶಾಸಕರಾದ ನಾಗೇಶ್, ಪುತ್ತೂರು ಶಾಸಕದಾರ ಸಂಜೀವ ಮಠಂದೂರು ಮತ್ತು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯವಾದಿ ಹಾಗೂ ಶ್ರೀರಾಮ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿರುವ ಅರುಣಶ್ಯಾಮ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಹಣಾ ಅಭಿಯಂತರರು ಗೋಕುಲದಾಸ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಾಯಾಜಿ, ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್ ಎನ್. ಉಪಸ್ಥಿತರಿದ್ದರು.
ಪದವಿ ವಿದ್ಯಾಲಯದ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿನ್ನಪ್ಪ ಶ್ರೀಮಾನ್ ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here