ಬಂಟ್ವಾಳ: ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಿಮೊಗರು ಎಂಬಲ್ಲಿ ನಡೆದಿದೆ.
ಡಿ.೮ರಂದು ಬೆಳಿಗ್ಗೆ ೫ಗಂಟೆಯ ವೇಳೆಗೆ ಪಿಲಿಮೊಗರು ಗ್ರಾಮದಲ್ಲಿ ವ್ಯಕ್ತಿಯೋರ್ವ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಬಳಿಕ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಿಸಲಾಗಿದೆ. ರಮಣನ್ (೫೫) ಹೆಸರು ಎಂದು ತಿಳಿದುಬಂದಿದ್ದು, ಮಾನಸಿಕ ಅಸ್ವಸ್ಥರಾಗಿರುವ ಇವರು ಮಾಜಿ ಸೈನಿಕರಾಗಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅದಲ್ಲದೆ, ಪಣಂಬೂರಿನ ಎನ್‌ಎಂಪಿಟಿ ಕಾಲನಿಯಿಂದ ಡಿ. ೫ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರಮಣನ್ ಅವರನ್ನು ಪಣಂಬೂರು ಠಾಣಾ ಪೊಲೀಸರಿಗೆ ಹಸ್ತಂತರಿಸಲಾಗಿದೆ ಎಂದು ಬಂಟ್ವಾಳದ ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ, ಡಿ. ೯: ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಿಮೊಗರು ಎಂಬಲ್ಲಿ ನಡೆದಿದೆ.
ಡಿ.೮ರಂದು ಬೆಳಿಗ್ಗೆ ೫ಗಂಟೆಯ ವೇಳೆಗೆ ಪಿಲಿಮೊಗರು ಗ್ರಾಮದಲ್ಲಿ ವ್ಯಕ್ತಿಯೋರ್ವ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಬಳಿಕ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಿಸಲಾಗಿದೆ. ರಮಣನ್ (೫೫) ಹೆಸರು ಎಂದು ತಿಳಿದುಬಂದಿದ್ದು, ಮಾನಸಿಕ ಅಸ್ವಸ್ಥರಾಗಿರುವ ಇವರು ಮಾಜಿ ಸೈನಿಕರಾಗಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅದಲ್ಲದೆ, ಪಣಂಬೂರಿನ ಎನ್‌ಎಂಪಿಟಿ ಕಾಲನಿಯಿಂದ ಡಿ. ೫ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರಮಣನ್ ಅವರನ್ನು ಪಣಂಬೂರು ಠಾಣಾ ಪೊಲೀಸರಿಗೆ ಹಸ್ತಂತರಿಸಲಾಗಿದೆ ಎಂದು ಬಂಟ್ವಾಳದ ಪೊಲೀಸರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here