ಬಂಟ್ವಾಳ: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ್ ಕುಕ್ಕಾಜೆ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂರು ಆರೋಪಿಗಳನ್ನು ಬುಧವಾರ ಮಂಚಿಯಲ್ಲಿ ಪೋಲೀಸರು ಬಂಧಿಸಿದ್ದಾರೆ. ಮಂಚಿ ನಿವಾಸಿಗಳಾದ ಬಶಿರ್, ಕಬೀರ್ , ತನ್ವಿರ್ ಬಂಧಿತ ಆರೋಪಿಗಳು.

 

ಘಟನೆಯ ವಿವರ:
ನ. 30ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಕಟ್ಟೆಯ ಬಳಿ ಇರಾ ಗ್ರಾಮ ಪಂಚಾಯತಿ ಅಧ್ಯಕ್ಷ ರಜಾಕ್ ರವರ ಮೇಲೆ 3 ಜನ ಹಲ್ಲೆ ನಡೆಸಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ 123/19 ಕಲಂ 307,324,109 r/w 149 IPC ರಂತೆ ಪ್ರಕರಣ ದಾಖಲಾಗಿತ್ತು.
ಆದರೆ ಪ್ರಕರಣ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಗ್ರಾಮಾಂತರ ಠಾಣಾ ಪೋಲಿಸರು ಬಲೆಬೀಸಿದ್ದರು.
ಪ್ರಕರಣ ನಡೆದು 11 ದಿನಗಳ ಬಳಿಕ ಪೋಲೀಸರು ಆರೋಪಿ ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ‌
ಪ್ರಕರಣಕ್ಕೆ ಸಂಬಂದಿಸಿದಂತೆ ಖಚಿತ ಮಾಹಿತಿ ಮೇರೆಗೆ ಕುಕ್ಕಾಜೆ ಗ್ರಾಮದ ಬಶಿರ್ (27) ಕಬೀರ್ (23 ) ತನ್ವಿರ್ (23) ಇವರನ್ನು ಡಿ. 11 ರಂದು ಬಂಧಿಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನ ದಲ್ಲಿ ಗ್ರಾಮಾಂತರ ಪೋಲೀಸ್ ಠಾಣಾ ಎಸ್. ಐ.ಪ್ರಸನ್ನ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಜನಾರ್ದನ, ನಜೀರ್, ಶೇಖರ್ ಚಾವಗಲ್ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here