

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ ಸಭಾಭವನದಲ್ಲಿ ಗುರುವಾರ ೨೦೧೯-೨೦ ನೇ ಸಾಲಿನ ಎಸ್ಎಫ್ಸಿ ನಿಧಿಯಲ್ಲಿ ಕಾದಿರಿಸಿದ ಶೇ. 24.10, ಶೇ. 7.25 ಮತ್ತು ಶೇ. 5 ರ ನಿಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು.
ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಅವರು ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಲತಾವೇಣಿ, ಸುನೀತಾ ಕೋಟ್ಯಾನ್ ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಅಶೋಕ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಅಬ್ದುಲ್ ರಹಿಮಾನ್ ಹಸೈನಾರ್ ವಂದಿಸಿದರು.








