

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಡೆಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರವು ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಾಹಿ ಇಮಾಮ್, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕ ಆಸ್ತಿ – ಪಾಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.








