ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ನಗರದ ಸ್ಟೇಟ್ ಬ್ಯಾಂಕ್ ಬಳಿ ನಿಷೇಧಾಜ್ಞೆ ಉಲ್ಲಂಘಿಸಿ ಜಮಾಯಿಸಿದ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಲಾಠಿಚಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.

ಎಸ್ಕೆಎಸ್ಸೆಸ್ಸೆಫ್ ಸಂಘಟನೆಯು ಗುರುವಾರ ಮಧ್ಯಾಹ್ನ ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಈ ಮಧ್ಯೆ ಸೆ.144 ವಿಧಿಸಿದ ಹಿನ್ನಲೆಯಲ್ಲಿ ಸಂಘಟನೆ ಪ್ರತಿಭಟನೆಯನ್ನು ಮುಂದೂಡಿತ್ತು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಸಂದೇಶ ಆಧರಿಸಿ ಕೆಲವವರು ದ.ಕ. ಜಿಲ್ಲಾಧಿಕಾರಿ ಕಚೇರಿಯೆದುರು ಜಮಾಯಿಸಿದ್ದರು.

ಪೊಲೀಸರು ಕೂಡಾ ಸಾಕಷ್ಡು ಸಂಖ್ಯೆಯಲ್ಲಿ ಬಂದೋಬಸ್ತ್ ಕಲ್ಪಿಸಿದ್ದರು. ಆದರೂ ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ನಿಲ್ದಾಣದ ಸಮೀಪ ಯುವಕರು ಘೋಷಣೆ ಕೂಗತೊಡಗಿದರು, ಬಳಿಕ ಉದ್ರಿಕ್ತ ಗುಂಪು ಅಲ್ಲಿ ರಕ್ಷಣೆ ನೀಡಲು ಬಂದಿದ್ದ ಪೊಲೀಸರ ಮೇಲೆಯೇ ಕಲ್ಲೂತೂರಾಟ ನಡೆಸಿದೆ.
ಬಳಿಕ ಸಾರ್ವಜನಿಕ ಆಸ್ತಿ ಪಾಸ್ತಿಯ ಮೇಲೆಯೂ ಕಲ್ಲು ತೂರಾಟ ನಡೆಸುತ್ತಿದ್ದು, ಖಾಸಗಿ ಬಸ್ ಗಳ ಮೇಲೆ ಕೂಡಾ ಕಲ್ಲುತೂರಾಟ ನಡೆದಿದೆ.

ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here