Monday, October 23, 2023

ಮಂಗಳೂರು: ಗೋಲಿಬಾರ್ ಪ್ರಕರಣ ಸಿಐಡಿ ತನಿಖೆಗೆ

Must read

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿನ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಲಿದೆ ಎಂದರು.

ಯಡಿಯೂರಪ್ಪ ಅವರು, ರಾಜ್ಯ ರಾಜಧಾನಿಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸರ ಗೋಲಿಬಾರ್ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ನೀಡಿದ್ದಾರೆ. ಇನ್ನು ಇದನ್ನು ನ್ಯಾಯಾಂಗ ವ್ಯವಸ್ಥೆಗೂ ವಹಿಸಲಾಗಿತ್ತು. ಈ ಕುರಿತು ಮ್ಯಾಜಿಸ್ಟೇಟರ್​ ಕೂಡ ತನಿಖೆ ಮುಂದುವರೆಸಲಿದ್ದಾರೆ ಎಂದರು.

ಇನ್ನು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿ ಹಲವೆಡೆ ಇಂದು ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಇರುವುದರಿಂದ ಬಿಗಿ ಭದ್ರತೆ ವಹಿಸುವಂತೆ ಸಿಎಂ ಸೂಚಿಸಿದ್ದಾರೆ.

ಮಂಗಳೂರಿನಲ್ಲಿ ಈಗಾಗಲೇ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಿನ್ನೆ ಮಂಗಳೂರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು, ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ತೊಂದರೆಯಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡ ಕಾಂಗ್ರೆಸ್​ ತನ್ನ ಲಾಭಕ್ಕಾಗಿ ಈ ಪ್ರತಿಭಟನೆಗೆ ಮುಂದಾಗಿದೆ. ಈ ಘಟನೆಗೆಲ್ಲಾ ಕಾಂಗ್ರೆಸ್​ ಕಾರಣ ಎಂದು ಆರೋಪಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಇನ್ನೊಂದು ವಾರ ಕಳೆದ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ತಿಳಿಸಿದರು.

More articles

Latest article