


ಬಂಟ್ವಾಳ: ಕೈರಂಗಳ ಕೃಷಿ ಉತ್ಸವ 2019 ಕಾರ್ಯಕ್ರಮವು ಡಿ. 27 ರಿಂದ 29 ರ ವರೆಗೆ 3 ದಿನ ಶಾರದಾಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಇಲ್ಲಿ ನಡೆಯಲಿದೆ. ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ಕೃಷಿ ಸಂಬಂಧಿತ ವಿಚಾರಗೋಷ್ಠಿಗಳು, ವಿವಿಧ ಸಹಕಾರಿ ಸಂಘಗಳ ಮಳಿಗೆಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಿಂದ ಮಾರ್ಗದರ್ಶನ, ಕೃಷಿ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ, ಕೃಷಿ ಪೂರಕ ಚಟುವಟಿಕೆಗಳಲ್ಲಿ ಪಾಲ್ಗೊಂಡ ಹಿರಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಹಾಗೂ ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.







