ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು , ಕಾರ್ಮಿಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮದ್ಯಾಹ್ನ ವಿಟ್ಲ ದಲ್ಲಿ ನಡೆದಿದೆ.
ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಅರುಣೋದಯ ಎಂಬ ಸೆಲೂನ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ.
ಸೆಲೂನನಲ್ಲಿ ಕೆಲಸ ಮಾಡುತ್ತಿದ್ದ ಒರ್ವನಿಗೆ ಬೆಂಕಿ ತಗುಲಿದ್ದು, ಅತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ತೀವ್ರತೆಗೆ ಇತರ ಅಂಗಡಿಗಳಿಗೆ ಆಗಬಹುದಾದ ಅಪಾಯ ತಪ್ಪಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವ ಕಾರ್ಯಚರಣೆ ನಡೆಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here