ಮಂಗಳೂರು ಗೋಲಿಬಾರ್ ನಲ್ಲಿ ಘೋಷಿಸಿದ್ದ ಪರಿಹಾರವನ್ನು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಹಿಂಪಡೆದ ಬೆನ್ನಲ್ಲೇ ಸಿಎಎ ವಿರೋಧಿಸಿ ಹಿಂಸಾಚಾರದ ವೇಳೆ ಪೊಲೀಸ್ ಗೋಲಿಬಾರ್ ಗೆ ಬಲಿಯಾದವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಂದು ಕೊಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಘಟನೆ ನಡೆದು ಎರಡೇ ದಿನದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ತಲಾ ₹10 ಲಕ್ಷ ಘೋಷಿಸಿದ್ದರು. ಬಳಿಕ ಸ್ವಪಕ್ಷದ ಕೆಲವರ ಒತ್ತಡಕ್ಕೆ ಮಣಿದು ನಿನ್ನೆ ಪರಿಹಾರದ ಹಣವನ್ನು ತಡೆದಿದ್ದರು. ಇದೀಗ ಮಮತಾ ಬ್ಯಾನರ್ಜಿ ಮೃತ ಯುವಕರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿರೋದು ಅಚ್ಚರಿ ಮೂಡಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here