ಬಂಟ್ವಾಳ : ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಅಣ್ಣಳಿಕೆ-ಕರಿಮಲೆ ಗ್ರಾಮಸ್ಥರು ಅಣ್ಣಳಿಕೆ ದ್ವಾರದ ಬಳಿ ಹಾಕಲಾಗಿದ್ದ ಬ್ಯಾನರ್‌ ಅನ್ನು ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಅಭಿವೃದ್ಧಿ ಯೋಜನೆಯಲ್ಲಿ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಅಣ್ಣಳಿಕೆ -ಕರಿಮಲೆ ರಸ್ತೆ ಹಾಗೂ ತಡೆಗೋಡೆ 2 ಕೋಟಿ ರೂ. ಅನುದಾನ ಮಂಜೂರು ಮಾಡಿಸಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಅಣ್ಣಳಿಕೆ ಗ್ರಾಮಸ್ಥರು ಅಣ್ಣಳಿಕೆ ದ್ವಾರದ ಬಳಿ ಬುಧವಾರ ಬ್ಯಾನರ್‌ವೊಂದನ್ನು ಅಳವಡಿಸಿದ್ದರು. ಅದನ್ನು ಕಿಡಿಗೇಡಿಗಳು ಸಂಪೂರ್ಣ ಹರಿದು ಭಗ್ನಗೊಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here