ವಿಟ್ಲ: ಒಳಗಣ್ಣಿಂದ ಮಾತ್ರ ಭಗವಂತನನ್ನು ಕಾಣಲು ಸಾಧ್ಯವಿದೆ. ಜ್ಞಾನದ ಕಣ್ಣನ್ನು ಬೆಳಗಿಸುವ ಕಾರ್ಯ ನಡೆಯಬೇಕು. ಜನಸೇವೆಗಾಗಿ ಸಂಘ ಸಂಸ್ಥೆಗಳು ಮುಂದೆ ಬರಬೇಕು. ಒಳ್ಳೆಯ ದೃಷ್ಟಿಯಿಂದ ಪ್ರತಿಯೊಂದನ್ನು ಕಾಣುವ ಕಾರ್ಯ ಎಲ್ಲರಿಂದ ನಡೆಯಬೇಕು. ಲೋಕದ ಹಿತಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಒಡಿಯೂರು ವಿದ್ಯಾಪೀಠದಲ್ಲಿ ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು, ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು, ಎಸ್ಸಿಲೋರ್ ವಿಷನ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕರೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಆರ್. ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಅಧ್ಯಕ್ಷ ಎ. ಸುರೇಶ್ ರೈ, ಬೆಂಗಳೂರು ಎಸ್ಸಿಲೋರ್ ವಿಷನ್ ಫೌಂಡೇಶನ್ ನ ಧರ್ಮಪ್ರಸಾದ್ ರೈ, ಉದ್ಯಮಿ ಚಂದ್ರಹಾಸ ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾ ಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಯು. ಕಿರಣ್, ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಯೋಜನೆಯ ಬಂಟ್ವಾಳ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಲೀಲಾ ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here