ಬಂಟ್ವಾಳ: ತಾಲೂಕಿನ ಕೊಯಿಲ ಗ್ರಾಮದ ಪಾಂಡವರಗುಡ್ಡೆ ನಿವಾಸಿ ಮಾಸ್ಟರ್ ಚಿರಾಗ್ ಅನಾರೋಗ್ಯದಿಂದ ಬಳಲುತ್ತಿದ್ದು ಮಗುವಿನ ತಾಯಿ ಪವಿತ್ರ ರವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.1,00,000/- ಹಾಗೂ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ಶಶಿಕಲಾ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.1,50,000/- ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ರಾಮದಾಸ್ ಬಂಟ್ವಾಳ ಉಪಸ್ಥಿರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here