ಬಂಟ್ವಾಳ: ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದ ಕಾರ್ಮಿಕ ವರ್ಗದ ಬದುಕಿನ ಮೇಲೆ ಬಹಳಷ್ಟು ಪ್ರತಿಕೂಲ ಪರಿಣಾಮಗಳಾಗುತ್ತಿದ್ದು ಇದರ ವಿರುದ್ಧ ಜ. ೮ರಂದು ಅಖಿಲ ಭಾರತ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಇತರ ಸಾರ್ವಜನಿಕ ರಂಗದ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಇಡೀ ದೇಶದಾದ್ಯಂತ ಒಂದು ದಿನದ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಇದರ ಭಾಗವಾಗಿ ಜೆಸಿಟಿಯು ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿ.ಸಿ.ರೋಡು ಮಿನಿವಿಧಾನ ಸೌಧದ ಎದುರು ಸಾಮೂಹಿಕ ಧರಣಿ ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಸಂಘಟಿತ ವಲಯದ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಬೀಡಿ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು ಬೀದಿ ಬದಿ ವ್ಯಾಪಾರಸ್ಥರು, ರಿಕ್ಷಾ ಮತ್ತು ಟೂರಿಸ್ಟ್ ಗೂಡ್ಸ್ ವಾಹನ ಚಾಲಕ ಮಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಸಿಟಿಯು ಬಂಟ್ವಾಳ ತಾಲೂಕು ಸಂಚಾಲಕ ಬಿ.ಶೇಖರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here