ವಿಟ್ಲ: ಪುಣಚ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಹಿಳಾ ಗ್ರಾಮ ಸಭೆ ನಡೆಯಿತು. ಗ್ರಾಮ ಪಂಚಾಯತ್ ಪ್ರತಿಭಾ ಶ್ರೀಧರ ಶೆಟ್ಟಿ ವಹಿಸಿಕೊಂಡರು. ಮಹಿಳಾ ಸದಸ್ಯರ ಸಮಸ್ಯೆ, ಸಲಹೆ ಸೂಚನೆ, ಅಹವಾಲುಗಳ ಬಗ್ಗೆ ಚರ್ಚೆ ನಡೆಯಿತು.
ಪುಣಚ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಂಸೀಲಾ ಅವರು ಮಹಿಳಾ ಮತ್ತು ಮಕ್ಕಳ ಆರೋಗ್ಯ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆಯ ಶಕ್ತಿ ಕೇಂದ್ರದ ಸಂಯೋಜಕಿ ವಿನಿತಾ ಮಹಿಳಾ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ತರಬೇತುದಾರರಾದ ರತ್ನಶ್ರೀ ಜೋಸೆಫ್ ಜಿ.ಎಂ ರೆಬೆಲ್ಲೋ ಅವರು ಘನ ತ್ಯಾಜ್ಯ ವಿಲೇವಾರಿಯಲ್ಲಿ ನಾಗರೀಕನ ಕರ್ತವ್ಯವನ್ನು ಪಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಸಭೆಯಲ್ಲಿ ಆರೋಗ್ಯ ಸಹಾಯಕಿ, ಗ್ರಾಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಪಿಡಿಒ ಲಾವಣ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here