Sunday, October 22, 2023

ಜ.11: ಶ್ರೀರಾಮ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

Must read

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ದಶಮಾನೋತ್ಸವದ ಅಂಗವಾಗಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ರಕ್ತದಾನ ಶಿಬಿರವು ಜ.11 ರಂದು ಶನಿವಾರ ಬೆಳಗ್ಗೆ 10ರಿಂದ ಸಂಜೆ 3.30ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ, ಪ್ರಣವ ವಿದ್ಯಾರ್ಥಿ ಸಂಘ, ಭಾರತೀಯ ರೆಡ್‌ಕ್ರಾಸ್ ಘಟಕ ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿದೆ.

ಆಸಕ್ತ ವಿದ್ಯಾರ್ಥಿಗಳು, ಸಾರ್ವಜನಿಕರು, ಪೋಷಕರು, ಹಾಗೂ ವಿವಿಧ ಸಂಘ ಸಂಸ್ಥೆಗಳು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More articles

Latest article