ಲಕ್ನೋ: ಉತ್ತರ ಪ್ರದೇಶದ ಕನೌಜ್ ನಲ್ಲಿ ನಿನ್ನೆ ರಾತ್ರಿ ಲಾರಿ ಮತ್ತು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಭೀಕರ ಘಟನೆ ನಡೆಯಿತು.
ಬಸ್ ನಲ್ಲಿ ಸುಮಾರು 46 ಪ್ರಯಾಣಿಕರು ಇದ್ದರು, ಘಟನೆ ನಡೆದ ವೇಳೆ 21 ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಜೈಪುರಕ್ಕೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಸ್ಲೀಪರ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಅಪಘಾತದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಅವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಸ್ಪತ್ರೆಗೆ ದಾಖಲಾದ 21 ಜನರು ಪ್ರಾಣಾಪಾಯದಿಂದ ಪಾರಾಗಿದ್ದು, ಆ ಕೂಡಲೇ ಬಸ್ ಮತ್ತು ಟ್ರಕ್ ಗಳಲ್ಲಿದ್ದ ಬೆಂಕಿಯನ್ನು ನಂಧಿಸಲಾಯಿತು. ಬಸ್ ನೊಳಗೆ ಸಿಲುಕಿದ್ದ ಉಳಿದ ಜನರು ಜೀವಂತವಾಗಿ ಉಳಿದಿಲ್ಲ ಎಂದು ಕಾನ್ಪುರ ಜನರಲ್ ಪೊಲೀಸ್ ಮೋಹಿತ್ ಅಗರವಾಲ್ ಮಾಹಿತಿ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here